ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಭೇಟಿ ನೀಡಲಿದ್ದಾರೆ. ತಳಿಪರಂಬದಲ್ಲಿರುವ ಈ ದೇವಸ್ಥಾನಕ್ಕೆ ಯಡಿಯೂರಪ್ಪ ಈ ಹಿಂದೆಯೂ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ಆನೆಯೊಂದನ್ನು ಭಕ್ತಿಯಿಂದ ಸಮರ್ಪಿಸಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂದು ವರದಿಯಾಗಿದೆ