ಬೆಂಗಳೂರು: ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ಮುಂದುವರಿದಿದೆ. ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ಬಸ್ ನಲ್ಲಿ ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ನಿಷೇಧಿಸಲಾಗಿದೆ. ಬೆಂಗಳೂರು ನಗರದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.