ಬೆಂಗಳೂರು: ನಿಷೇಧಾಜ್ಞೆ ನಡುವೆಯೂ ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿ ಜಾರಿ ವಿರೋಧಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆದಿದ್ದು, ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸರು ಗುಂಡು ಹಾರಿಸಿದ್ದು, ಕರ್ಫ್ಯೂ ಜಾರಿ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿಂದು ಪುರಭವನ ಮುಂಭಾಗ ಹಾಗೂ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಿಐಟಿಯು, ಸಿಪಿಎಂ, ಪ್ರಗತಿಪರ ಸಂಘಟನೆಗಳ ಸದಸ್ಯರು, ಚಿಂತಕರು, ಸಾಹಿತಿಗಳು ಹಾಗೂ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು, 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.
ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ; 100ಕ್ಕೂ ಅಧಿಕ ಮಂದಿ ಬಂಧನ
Follow Us