ಮಂಗಳೂರು: ಹಿಂಸಾಚಾರ ಕುರಿತಂತೆ ಸಿಐಡಿ ತನಿಖೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಐಡಿ ತನಿಖೆ ಬೇಕಾಗಿಲ್ಲ. ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸಿಐಡಿ ಯಲ್ಲಿ ರಾಜ್ಯ ಪೊಲೀಸರೇ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸದಾ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.