ಬೆಂಗಳೂರು: ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಬುಧವಾರ ಸಂಜೆಯೊಳಗೆ ಪ್ರಕಟಿಸುವುದಾಗಿ ಎಂದು ಪಿಯು ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ ತಿಳಿಸಿದ್ದಾರೆ.
ಬರುವ 2020ರ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಜನವರಿ 9 ರಿಂದ 24ರ ವರೆಗೆ ನಡೆಸಲು ಈ ಹಿಂದೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ ಜನವರಿ 6 ರಿಂದ 11 ವರೆಗೆ ಜೆಇಇ ಮುಖ್ಯ ಪರೀಕ್ಷೆ ಸಹ ನಡೆಯುವ ಕಾರಣ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಇದೀಗ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಜ.13 ರಿಂದ 25 ರ ವರೆಗೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ-ಪರಿಷ್ಕೃತ ವೇಳಾಪಟ್ಟಿ ಶೀಘ್ರ
Follow Us