ಉಡುಪಿ: ಹಿರಿಯ ಯತಿವರ್ಯ ಶ್ರೀ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದಾರೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಣಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಆತಂಕಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಪೇಜಾವರ ಶ್ರೀಗಳು ಇತ್ತೀಚೆಗೆ ಉತ್ತರ ಭಾರತ ಪ್ರವಾಸ ಕೈಗೊಂಡಿದ್ದರು. ಅಲ್ಲಿನ ಕೊರೆಯುವ ಚಳಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.