ಉಡುಪಿ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ದೇಹದಲ್ಲಿರುವ ಕಫ ನಿಧಾನವಾಗಿ ಕರಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಚಿಕಿತ್ಸೆಗಾಗಿ ಶ್ರೀಗಳನ್ನು ಬೇರೆ ಕಡೆ ಕರೆದೊಯ್ಯುವ ಸಾಧ್ಯತೆಯನ್ನು ತಳ್ಳಿಹಾಕಿದ್ದರು.