ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದ್ದು, ವೆಂಟಿಲೇಟರ್ನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ಸಂಬಂಧ ಮಣಿಪಾಲ ಕೆಎಂಸಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ರೀಗಳ ಆರೋಗ್ಯ ಗಂಭೀರವಾಗಿದೆ. ಹಾಗೇ ಚಿಕಿತ್ಸೆಗೂ ಸ್ಪಂದಿಸುತ್ತಿದ್ದಾರೆ. ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದೆ.
ಮಣಿಪಾಲ ಕೆಎಂಸಿ ಆಸ್ಪತ್ರೆ ಡಾ.ಸುಧಾ ವಿದ್ಯಾ ಸಾಗರ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದೆ. ನ್ಯುಮೋನಿಯಾ ಸಮಸ್ಯೆಯಿಂದಾಗಿ ಪೇಜಾವರ ಶ್ರೀಗಳು ಗುರುವಾರ ಮುಂಜಾನೆ 5 ಗಂಟೆಗೆ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು.