ಉಡುಪಿ: ಶ್ವಾಸಕೋಶ ತೊಂದರೆ, ನ್ಯುಮೋನಿಯಾ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಅವರ ಶಿಷ್ಯೆ, ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದರು.
ಝಡ್ಪ್ಲಸ್ ಭದ್ರತೆಯಲ್ಲಿ ಆಗಮಿಸಿದ ಅವರು ಕಾರಿನಿಂದ ಇಳಿದು ವ್ಹೀಲ್ ಚೇರ್ ಮೂಲಕ ಆಸ್ಪತ್ರೆ ಪ್ರವೇಶಿಸಿದರು.