ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮಣಿಪಾಲಕ್ಕೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಪೇಜಾವರ ಶ್ರೀ ವಿಶ್ವೇಶ ತೀರ್ಧ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದರೂ ಆರೋಗ್ಯ ಸ್ಛಿತಿ ಈಗಲೂ ಗಂಭೀರವಾಗಿದೆ ಎಂದು ವರದಿಯಾಗಿದೆ.