ಉಡುಪಿ: ಪೇಜಾವರ ಸ್ವಾಮೀಜಿ ವಿಶ್ವೇಶ ತೀರ್ಥ ರ ಆರೋಗ್ಯ ಸ್ಥಿತಿ ಕುರಿತಂತೆ ಮಣಿಪಾಲ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಪೇಜಾವರ ವಿಶ್ವೇಶ ತೀರ್ಥ ರ ಆರೋಗ್ಯ ಗಂಭೀರವಾಗಿದ್ದರೂ ಸ್ಥಿರವಾಗಿದೆ. ವೆಂಟಿಲೇಟರ್ ಮೂಲಕ ಉಸಿರಾಟ ನಡೆಸುತ್ತಿದ್ದಾರೆ ಎಂದು ವೈದ್ಯಕೀಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ. ಹಿರಿಯ ಯತಿ ವರ್ಯರಾದ ಪೇಜಾವರ ಶ್ರೀಗಳ ಅನಾರೋಗ್ಯ ಅವರ ಲಕ್ಷಾಂತರ ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ