ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಎರಡು ದಿನ ಕರ್ಫ್ಯೂ ವಿಧಿಸಲಾಗಿದೆ.
144 ಸೆಕ್ಷನ್ ಜಾರಿಯಲ್ಲಿದ್ದರೂ ಲೆಕ್ಕಿಸದೆ ಜನರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರ ಲಾಠಿಚಾರ್ಜ್, ಗಾಳಿಯಲ್ಲಿ ಗುಂಡು ಕ್ರಮಕ್ಕೆ ಪ್ರತಿಯಾಗಿ ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲುತೂರಾಟ ನಡೆಸುತ್ತಿದ್ದಾರೆ.
ಈ
ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ,
ಪಾಂಡೇಶ್ವರ, ಉರ್ವ, ಬಂದರು,
ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿಯವರೆಗೂ ಕರ್ಫ್ಯೂ
ಜಾರಿಗೊಳಿಸಿ ಕಂಡಲ್ಲಿ ಗುಂಡು ಆದೇಶ ಹೊರಡಿಸಲಾಗಿದೆ.