ಬೆಂಗಳೂರು: ಪ್ರವಾಹದಲ್ಲಿ ಹಾನಿಗೊಳಗಾದ ಮನೆಗಳನ್ನು ದುರಸ್ತಿ ಮಾಡಿ. ಈ ಮೂಲಕ ಸರ್ಕಾರದ ಆರ್ಥಿಕ ಸಹಾಯದ ಸದುಪಯೋಗ ಮಾಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರ ಮನೆ ಪುನರ್ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಘೋಷಿಸಿದೆ. ಇದರಲ್ಲಿ 1 ಲಕ್ಷ ರೂಪಾಯಿ ಪಾವತಿಸಲಾಗಿದೆ. ಉಳಿದ ಹಣವನ್ನು ಕಾಮಗಾರಿ ಪ್ರಗತಿ ಪರಿಶೀಲಿಸಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಜಿಪಿಎಸ್ ತಂತ್ರಜ್ಞಾನವನ್ನು ಇದಕ್ಕೆ ಬಳಸಿಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ