ಮೈಸೂರು: ಫ್ರೀ ಕಾಶ್ಮೀರ ಪೋಸ್ಟರ್ ವಿವಾದ ದಿನದಿಂದ ದಿನಕ್ಕೆ ಗಂಭೀರವಾಗುತ್ತಲೇ ಇದ್ದು, ನಗರ ಪೊಲೀಸ್ ಆಯುಕ್ತ ಬಾಲಕೃಷ್ಣ ಸೂಚನೆ ಮೇರೆಗೆ ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆಎನ್ಯುು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಸಂಜೆ ನಡೆದ ಪ್ರತಿಭಟನೆಯಲ್ಲಿ ಈ ‘ಫ್ರೀ ಕಾಶ್ಮೀರ’ ಪೋಸ್ಟರ್ ಪ್ರದರ್ಶಿಸಲಾಗಿತ್ತು. ತಮಿಳುನಾಡು ಮೂಲದ ನಳಿನಿ ಎಂಬಾಕೆ ಈ ಪೋಸ್ಟರ್ ಪ್ರದರ್ಶಿಸಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಆಕೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈಕೆ ಮೈಸೂರು ವಿವಿಯ ಹಳೆ ಪತ್ರಿಕೋದ್ಯಮ ವಿದ್ಯಾರ್ಥಿನಿ.
ಪ್ರತಿಭಟನೆ ನೇತೃತ್ವ ವಹಿಸಿದ್ದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಮಧ್ಯೆ, ಪೋಸ್ಟರ್ ವಿಚಾರ ಕುರಿತು ವರದಿ ನಿಡುವಂತೆ ರಾಜ್ಯಪಾಲ ವಿ.ಆರ್. ವಾಲಾ ಕುಲಸಚಿವ ಅರ್. ಶಿವಪ್ಪಗೆ ಸೂಚಸಿದ್ದಾರೆ.
ಫ್ರೀ ಕಾಶ್ಮೀರ ಪೋಸ್ಟರ್; ದೇಶದ್ರೋಹ ಕೇಸ್ ದಾಖಲು, ನಳಿನಿಗಾಗಿ ಶೋಧ
Follow Us