ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಿದ್ದು, ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಿಗೆ ತೃಪ್ತಿ ಪಡೆದುಕೊಂಡಿದೆ. ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ.
ಅಥಣಿಯಲ್ಲಿ ಬಿಜೆಪಿಯ ಮಹೇಶ್ ಕುಮಟಳ್ಳಿ, ಕಾಗವಾಡದಲ್ಲಿ ಶ್ರೀಮಂತ ಪಾಟೀಲ್, ಗೋಕಾಕ್ ನಲ್ಲಿ ರಮೇಶ್ ಜಾರಕೀಹೊಳಿ, ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್, ಹಿರೇಕೆರೂರಿನಲ್ಲಿ ಬಿ.ಸಿ.ಪಾಟೀಲ್, ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್, ವಿಜಯನಗರದಲ್ಲಿ ಆನಂದ್ ಸಿಂಗ್, ಚಿಕ್ಕಬಳ್ಳಾಪುರದಲ್ಲಿ ಕೆ.ಸುಧಾಕರ್, ಕೆ.ಆರ್.ಪುರಂನಲ್ಲಿ ಭೈರತಿ ಬಸವರಾಜ್, ಯಶವಂತಪುರದಲ್ಲಿ ಎಸ್.ಟಿ.ಸೋಮಶೇಖರ್, ಮಹಾಲಕ್ಷ್ಮೀ ಲೇಔಟ್ ನಲ್ಲಿ ಕೆ.ಗೋಪಾಲಯ್ಯ, ಕೆ.ಆರ್.ಪೇಟೆಯಲ್ಲಿ ಕೆ.ಸಿ.ನಾರಾಯಣಗೌಡ ಗೆಲುವು ಸಾಧಿಸಿದ್ದಾರೆ.
ಶಿವಾಜಿನಗರ ವಿಧಾ ರಿಜ್ವಾನ್ ಅರ್ಷದ್ , ಹುಣಸೂರಿನಲ್ಲಿ ಎಚ್.ಪಿ.ಮಂಜುನಾಥ ಜಯಗಳಿಸಿದ್ದು, ಹೊಸಕೋಟೆಯಲ್ಲಿ ಪಕ್ಷೇತರರಾಗಿ ಶರತ್ ಬಚ್ಚೇಗೌಡ ವಿಜಯಿಯಾಗಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ.