ಬೆಂಗಳೂರು: ಕ್ಲೀವ್ ಲ್ಯಾಂಡ್ ಟೌನ್ ನಲ್ಲಿರುವ ಬಿಬಿಎಂಪಿ ಕಾಲೇಜು ವಿದ್ಯಾರ್ಥಿನಿ ರಹಮತುನ್ನೀಸಾ ಬಿಕಾಂ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ. ರಹಮತುನ್ನೀಸಾ ಸಾಧನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ಬಡತನ ಇದ್ದರೂ ಅದನ್ನು ಮೆಟ್ಟಿ ನಿಂತು ಸಾಧನೆ ಮಾಡಿರುವ ರಹಮತುನ್ನೀಸಾ ಇತರ ವಿದ್ಯಾರ್ಥಿಗಳಿಗೆ ಮಾದರಿ ಎಂದು ಪ್ರಶಂಸೆಗಳ ಮಹಾಪೂರವೇ ಹರಿದು ಬಂದಿದೆ.