ಬೆಂಗಳೂರು: ಪೊಲೀಸರ ಅನುಮತಿ ನಿರಾಕರಣೆ ನಡುವೆಯೂ ಬಿಸಿಯೂಟ ತಯಾರಕರು ಸೋಮವಾರ ಬೆಂಗಳೂರು ರೈಲು ನಿಲ್ದಾಣದ ಬಳಿ ಭಾರಿ ಪ್ರತಿಭಟನೆ ನಡೆಸಿದರು.
ಖಾಸಗಿ ಸಂಸ್ಥೆಗಳಿಗೆ ಬಿಸಿಯೂಟ ನಿರ್ವಹಣೆ ವಹಿಸುವ ಹುನ್ನಾರ ಕೈಬಿಡಬೇಕು, ಕನಿಷ್ಠ ವೇತನ ಜಾರಿ ಹಾಗೂ ಸೇವಾ ಭದ್ರತೆ ಕಲ್ಪಿಸಬೇಕು ಎಂಬ ಬೇಡಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ದಾವಣಗೆರೆ, ಹಾವೇರಿ, ಗದಗ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ರಾಮನಗರ, ತುಮಕೂರು, ಬೀದರ್, ಯಾದಗಿರಿ ಮತ್ತಿತರ ಜಿಲ್ಲೆಗಳಿಂದ ಆಗಮಿಸಿದ್ದ ಬಿಸಿಯೂಟ ಕಾರ್ಯಕರ್ತೆಯರು ಪೊಲೀಸರ ಅನುಮತಿ ಸಿಗದ ಕಾರಣ ರೈಲು ನಿಲ್ದಾಣದ ಬಳಿಯೇ ಪ್ರತಿಭಟನೆ ನಡೆಸಿದರು.
ಮುಂಜಾಗ್ರತಾ ಕ್ರಮವಾಗಿ ಸಿಐಟಿಯು ರಾಜ್ಯಾಧ್ಯಕ್ಷೆ ಹಾಗೂ ರಾಜ್ಯ ಅಕ್ಷರ ದಾಸೋಹ ಗೌರವ ಅಧ್ಯಕ್ಷೆ ವರಲಕ್ಷ್ಮಿ ಅವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದರು.
ಬೆಂಗಳೂರಲ್ಲಿ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ
Follow Us