ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಸುಮಾರು 20000 ಮಂದಿ ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದರಿಂದಾಗಿ ನಗರದಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಭೀತಿ ಕೂಡ ಎದುರಾಗಿದೆ. ಪ್ರೋತ್ಸಾಹ ಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಆಗ್ರಹಿಸುತ್ತಿದ್ದಾರೆ.