ಬೆಂಗಳೂರು: ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಹಲವು ಸಂಘಟನೆಗಳು ಶನಿವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ನಗರದ ಆರು ಸ್ಥಳಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಗಳಿವೆ. ಇದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಆಗುವ ಭೀತಿ ಎದುರಾಗಿದೆ. ಈ ಮಧ್ಯೆ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.