ಬೆಂಗಳೂರು: ಪೌರತ್ವ ಕಾನೂನು ತಿದ್ದುಪಡಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಕಾಂಗ್ರೆಸ್ ಮುಖಂಡ ಜಿ ಪರಮೇಶ್ವರ್ ಟೀಕಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪರಮೇಶ್ವರ್,ಇದು ಶಾಂತಿಯುತ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ. ಆಡಳಿತ ಯಂತ್ರದ ದುರುಪಯೋಗ ಎಂದು ಟೀಕಿಸಿದ್ದಾರೆ. ಸರ್ಕಾರ ಯುವ ಧ್ವನಿಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದೆ ಎಂದು ಟೀಕಿಸಿದ್ದಾರೆ.