ಮಂಗಳೂರು: ಮಂಗಳೂರು ನಗರದಲ್ಲಿ ಡಿ. 19ರಂದು ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗೋಲಿಬಾರ್ ನಲ್ಲಿ ಅಮಾಯಕರು ಬಲಿಯಾಗಿದ್ದಾರೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿ ತಿಳಿಸಿದೆ.
ಡಿ. 19ರಂದು ನಡೆದ ಹಿಂಸಾಚಾರ ಹಾಗೂ ಗೋಲಿಬಾರ್ ನಲ್ಲಿ ಜಲೀಲ್ ಮತ್ತು ನೌಶೀನ್ ಎಂಬ ಅಮಾಯಕರ ಬಲಿಯಾಗಿದೆ. ಅವರ ಕುಟುಂಬಗಳು ಅನಾಥವಾಗಿವೆ. ಆ ಕುಟುಂಬಕ್ಕೆ ಸೂಕ್ತ ಆಶ್ರಯ, ಪರಿಹಾರ ನೀಡಬೇಕಿದೆ. ಘಟನೆಯ ಸಂಪೂರ್ಣ ತನಿಖೆಗೆ ನ್ಯಾಯಾಂಗ ವಿಚಾರಣಾ ಆಯೋಗ ರಚಿಸಬೇಕು ಎಂದು ವರದಿ ಶಿಫಾರಸು ಮಾಡಿದೆ.
ಪೊಲೀಸ್ ಗುಂಡಿನ ದಾಳಿ ಕುರಿತ ತನಿಖೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಗೋಪಾಲಗೌಡ, ಬಿ.ಟಿ.ವೆಂಕಟೇಸ್ ಮತ್ತು ಶ್ರೀನಿವಾಸರಾಜು ಅವರನ್ನೊಳಗೊಂಡ ಜನ ನ್ಯಾಯಮಂಡಳಿ ಸರ್ಕಾರಕ್ಕೆ 32 ಪುಟಗಳ ವಿಸ್ತೃತ ವರದಿ ಸಲ್ಲಿಸಿದೆ.