ಬೆಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಪೊಲೀಸರೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ತಮ್ಮ ಮಾತಿಗೆ ಪುಷ್ಟಿಯಾಗಿ ಗಲಭೆಗೆ ಸಂಬಂಧಿಸಿದ 35 ವಿಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿರುವ ಅವರು, ‘ಒಂದಾದರೂ ಬೀಳಲಿ ಬಿಡಿ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ.
ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಗೆ ಪೊಲೀಸರೇ ಕಾರಣ ಎಂದು ನೇರ ಆರೋಪ ಮಾಡಿದ್ದಾರೆ.
ಬೆಂಕಿ ಹಚ್ಚುವ ಕೆಲಸ ಬಿಡಲಿ:
ಬೆಂಕಿ ಹಚ್ಚುವ ಕೆಲಸವನ್ನು ಕುಮಾರಸ್ವಾಮಿ ಮೊದಲು ಬಿಡಬೇಕು. ಗೂಂಡಾಗಳ ಪರವಾಗಿ ಕುಮಾರಸ್ವಾಮಿ ಮಾತನಾಡುತ್ತಿದ್ದಾರೆ. ಹತ್ತು ಜನ್ಮವೆತ್ತಿದರೂ ಅವರು ಮತ್ತೆ ಸಿಎಂ ಅಗಲ್ಲ. ಆದರೂ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.