ಮಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ತನಿಖೆಯ ಸ್ವರೂಪವನ್ನು ಗೃಹಸಚಿವರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದರು.
ಮಂಗಳೂರು ನಗರದಲ್ಲಿ ವಿಧಿಸಲಾಗಿರುವ ಕರ್ಫ್ಯೂವನ್ನು ಶನಿವಾರ ಸಂಜೆ 6ರವರೆಗೆ ಹಾಗೂ ಡಿ.22ರಂದು ಬೆಳಗ್ಗೆಯಿಂದ ಸಂಜೆವರೆಗೂ ಹಿಂಪಡೆಯಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಗೋಲಿಬಾರ್‌ನಿಂದ ಮೃತಪಟ್ಟವರ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿದ್ದೇನೆ, ಮೃತಪಟ್ಟವರಿಗೆ ಸೂಕ್ತ ಹಾಗೂ ನಿಯಮಾನುಸಾರ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.23ರಂದು ಕರ್ಫ್ಯೂವನ್ನು ಸಂಪೂರ್ಣ ಹಿಂಪಡೆದು ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಮುಂದುವರಿಸಲಾಗುವುದು ಎಂದರು.