ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ಪರ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.
ಇಲ್ಲಿನ ಬಿಜೆಪಿ ಕಾರ್ಯಕರ್ತ ಮಹಮ್ಮದ್ ಅಸ್ಗರ್ ಎಂಬುವರಿಗೆ ಈ ಬೆದರಿಕೆ ಕರೆಬಂದಿದ್ದು, ಮಹಮ್ಮದ್ ಆಸ್ಗರ್ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಂರಿಗೆ ಯಾವುದೇ ತೊಂದರೆ ಇಲ್ಲ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.
ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಂಗಳೂರು ಬಿಜೆಪಿ ಕಾರ್ಯಕರ್ತನಿಗೆ ವಿದೇಶದಿಂದ ಬೆದರಿಕೆ ಕರೆ
Follow Us