ಮಂಗಳೂರು: ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟ ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ್ದರ ಹಿಂದೆ ಹೊರಗಿನ ದುಷ್ಟ ಶಕ್ತಿಗಳ ಕೈವಾಡ ಇದೆ ಎಂಬ ಸಂಶಯ ವ್ಯಕ್ತವಾಗಿದೆ. ರಾಜ್ಯ ಗೃಹ ಸಚಿವ ಬೊಮ್ಮಾಯಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಂಸಾಚಾರ ಸಂದರ್ಭದಲ್ಲಿ ಶಾಂತಿಗೆ ಮನವಿ ಮಾಡಿದ್ದ ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರ ಮೇಲೆ ಕೂಡ ಮಾರಣಾಂತಿಕ ಹಲ್ಲೆ ನಡೆದಿರುವುದು ಈ ಅನುಮಾನಕ್ಕೆ ಪುಷ್ಟಿ ನೀಡಿದೆ. ಪ್ರಮುಖವಾಗಿ ಕೇರಳದಿಂದ ಬಂದು ಮಂಗಳೂರಿನಲ್ಲಿ ಗಲಭೆ ಸೃಷ್ಟಿಸಿ ತಮ್ಮ ಬೇಳೆ ಬೇಯಿಸುವುದು ಈ ದುಷ್ಟರ ಸಂಚಾಗಿತ್ತು ಎಂದು ವರದಿಯಾಗಿದೆ.