ನವದೆಹಲಿ: ವಿಧಾನಸಭೆ ಉಪ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಗೌರವಿಸುತ್ತೇನೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿರುವುದು ಒಪ್ಪಿಕೊಳ್ಳುತ್ತೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆಯ ಪ್ರಚಾರದಲ್ಲಿ ಶಿವಕುಮಾರ್ ಹೆಚ್ಚಾಗಿ ಭಾಗವಹಿಸಿರಲಿಲ್ಲ.