ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ‘ಪದ್ಯಾಣ ಪ್ರಶಸ್ತಿ’ ಲಭಿಸಿದೆ.
ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.