ಶಿವಮೊಗ್ಗ: ಬಿಜೆಪಿ ಸರ್ಕಾರ ಇದೀಗ ಸ್ಥಿರವಾಗಿದೆ. ಸರ್ಕಾರಕ್ಕೆ ಯಾವ ಅಪಾಯವೂ ಇಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಮೂರುವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದು ಗ್ರಾಮೀಣಾಭಿವೃದ್ದಿ ಸಚಿವ ಈಶ್ವರಪ್ಪ ಅವರ ಮಾತು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ನಂಬಿ 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ತ್ಯಾಗವನ್ನು ಮರೆಯುವಂತಿಲ್ಲ ಎಂದು ಹೇಳಿದರು.