ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಧಾನಸಭಾ ಫಲಿತಾಂಶದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅತ್ಯುತ್ತಮ ಪ್ರದರ್ಶನಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಭಿನಂದಿಸಿದ್ದಾರೆ. ರಾಜ್ಯದ ತೆರಿಗೆ ಸಂಗ್ರಹ ಮತ್ತು ಯೋಜನಗೆಳ ಅನುಷ್ಟಾನ ಮಾಹಿತಿಯನ್ನು ಕೂಡ ಪ್ರಧಾನಿ ಕೇಳಿ ತಿಳಿದುಕೊಂಡಿದ್ದಾರೆ. ರಾಜ್ಯಕ್ಕೆ ಅಗತ್ಯಇರುವ ಎಲ್ಲ ಸಹಕಾರ ನೀಡುವ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ.