ಕಲಬುರಗಿ; ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕನೋರ್ವ ಸ್ಟಂಟ್ ಮಾಡಲು ಹೋಗಿ ಪ್ರಾಣ ಬಿಟ್ಟಿರುವ ವಿಡಿಯೋ ಈಗ ವೈರಲ್ ಆಗಿದೆ.
ನವೆಂಬರ್ 30ರಂದು ಚಿತ್ತಾಪುರ ತಾಲೂಕಿನ ಹೊಸೂರು ಗ್ರಾಮದಲ್ಲಿ 24 ವರ್ಷದ ಅಶೋಕ್ ಎಂಬ ಯುವಕ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳುವ ಮೂಲಕ ಮೆರವಣಿಗೆ ವೇಳೆ ಖುಷಿಯಿಂದ ಡ್ಯಾನ್ಸ್ ಮಾಡುತ್ತಿದ್ದನು. ನೆಲಕ್ಕೆ ತಲೆ ತಾಗಿಸಿ ಸುತ್ತು ಹಾಕುವ ಸ್ಟಂಟ್ ಪ್ರದರ್ಶಿಸುತ್ತಿದ್ದಾಗ ಅಲ್ಲಿಯೇ ಕುಸಿದುಬಿದ್ದು ಮೃತಪಟ್ಟಿರುವುದ ವಿಡಿಯೋದಲ್ಲಿ ಸೆರೆಯಾಗಿದೆ.
ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಾ ಕೊನೆಯುಸಿರೆಳೆದ ಯುವಕ
Follow Us