ಬೆಂಗಳೂರು: ‘ಕಾವೇರಿ ಕೂಗು’ ಅಭಿಯಾನದ ಹೆಸರಲ್ಲಿ ಇಲ್ಲಿಯವರೆಗೆ ಸಾರ್ವಜನಿಕರಿಂದ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂದು ಸದ್ಗುರು ಜಗ್ಗಿ ವಾಸುದೇವ್ ಅವರ ಈಶಾ ಫೌಂಡೇಷನ್ ಅನ್ನು ಹೈಕೋರ್ಟ್ ಪ್ರಶ್ನಿಸಿದೆ.
ಈ ಕುರಿತು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಈಶಾ ಫೌಂಡೇಷನ್ ಒಂದು ಲಾಭ ರಹಿತ ಆಧ್ಯಾತ್ಮಿಕ ಸಂಸ್ಥೆಯಾಗಿರುವಾಗ ಅದರ ಯೋಜನೆಗೆ ಹಣ ಸಂಗ್ರಹಿಸುತ್ತಿರುವುದೇಕೆ? ಆಧ್ಯಾತ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡಬಹುದೇ? ಯಾವ ಅಧಿಕಾರದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿದ್ದೀರಿ? ಎಂದು ನ್ಯಾಯಪೀಠ ಪ್ರಶ್ನಿಸಿದೆ.