Friday, November 27, 2020

ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಸಿಎಂ ಭೇಟಿ

ಕಣ್ಣೂರು:  ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು  ಭೇಟಿ ನೀಡಲಿದ್ದಾರೆ. ತಳಿಪರಂಬದಲ್ಲಿರುವ ಈ ದೇವಸ್ಥಾನಕ್ಕೆ ಯಡಿಯೂರಪ್ಪ ಈ ಹಿಂದೆಯೂ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ಆನೆಯೊಂದನ್ನು  ಭಕ್ತಿಯಿಂದ ಸಮರ್ಪಿಸಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂದು ವರದಿಯಾಗಿದೆ. ಮಂಗಳೂರಿನಲ್ಲಿ ನಡೆದ ಗೋಲಿಬಾರ್  ಪ್ರತಿಭಟಿಸಿ ತಿರುವನಂತಪುರದಲ್ಲಿ  ಕೆಲವರು ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ರೈತರ ದಿಲ್ಲಿ ಚಲೋ ಪ್ರತಿಭಟನೆ : ರಾಜಧಾನಿ ಪ್ರವೇಶಕ್ಕೆ ಅನುಮತಿ ನೀಡಿದ ಕೇಂದ್ರ

NEWSICS.COM ಚಂಡೀಗಢ: ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ಪಂಜಾಬ್ - ಹರಿಯಾಣ ಹಾಗೂ ಇತರ ರಾಜ್ಯಗಳ ರೈತರಿಗೆ ರಾಷ್ಟ್ರ ರಾಜಧಾನಿ ಪ್ರವೇಶಿಸಿ ಶಾಂತಿಯುತ ಪ್ರತಿಭಟನೆಗೆ ಕೇಂದ್ರ  ಅನುಮತಿ...

ಪ್ಲಾಸ್ಟಿಕ್ ತ್ಯಾಜ್ಯದ ಮಾಡ್ಯುಲ್’ಗಳಿಂದ ರಸ್ತೆ ನಿರ್ಮಾಣ

NEWSICS.COM ನೋಯ್ಡಾ: ಪ್ಲಾಸ್ಟಿಕ್ ತ್ಯಾಜ್ಯ ಮಾಡ್ಯುಲ್ ಬಳಸಿ ನೋಯ್ಡಾದಲ್ಲಿ ರಸ್ತೆ ನಿರ್ಮಾಣ ಪ್ರಾಯೋಗಿಕ ಕಾರ್ಯ ಗುರುವಾರ (ನ.26) ಪ್ರಾರಂಭಿಸಲಾಗಿದೆ. 500 ಮೀಟರ್ ಉದ್ದದ ರಸ್ತೆಯನ್ನು ನೋಯ್ಡಾ ಪ್ರಾಧಿಕಾರದೊಂದಿಗಿನ ಒಪ್ಪಂದದ ಭಾಗವಾಗಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್...

ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

NEWSICS.COM ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಈ ಮೂಲಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಅನುಮೋದನೆ ಪಡೆದುಕೊಂಡಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ...
- Advertisement -
error: Content is protected !!