ಬೆಂಗಳೂರು: ರಾಜ್ಯದಲ್ಲಿ ಶಾಂತಿಯುತವಾಗಿ ಹೊಸ ವರ್ಷಾಚರಣೆ ನಡೆದಿರುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಎಲ್ಲ ಪೊಲೀಸ್ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ತೆಗೆದುಕೊಂಡ ಮುನ್ನೆಚ್ಚರಿಕೆಯಿಂದಾಗಿ ಹೊಸ ವರ್ಷಾಚರಣೆ ಶಾಂತಿಯುತವಾಗಿ ನಡೆದಿದೆ ಎಂದು ಯಡಿಯೂರಪ್ಪ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.