ಬೆಂಗಳೂರು: ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇದಕ್ಕೆ ಕನ್ನಡಿಗರು ತಲೆಕೆಡಿಸಿಕೊಳ್ಳಬೆಕಿಲ್ಲ. ಕರ್ನಾಟಕದ ಒಂದಿಂಚು ಜಾಗವನ್ನೂ ನಾವು ಬಿಟ್ಟುಕೊಡಲ್ಲ. ಮಹಾಜನ್ ವರದಿಗೆ ನಾವು ಬದ್ಧರಾಗಿದ್ದೇವೆ ಎಂದು ವಿಧಾನಸೌಧದಲ್ಲಿ ಸೋಮವಾರ ಸ್ಪಷ್ಟಪಡಿಸಿದರು.