ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಯೇಸು ಪ್ರತಿಮೆ ವಿವಾದ ಪ್ರತಿಧ್ವನಿಸಿದೆ. ಕನಕಪುರದಲ್ಲಿ ಯೇಸು ಪ್ರತಿಮೆ ಸ್ಥಾಪನೆಯಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ವಹಿಸಿದ ಪಾತ್ರ ಅವರ ರಾಜಕೀಯ ವಿರೋಧಿಗಳಿಗೆ ಹೊಸ ಅಸ್ತ್ರ ಒದಗಿಸಿದೆ. ಬಿಜೆಪಿ ನಾಯಕರಾದ ಈಶ್ವರಪ್ಪ, ಶೋಭಾ ಕರಂದ್ಲಾಜೆ, ಅನಂತ ಕುಮಾರ ಹೆಗಡೆ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ, ಯಾರನ್ನೊ ಮೆಚ್ಚಿಸಲು ಶಿವಕುಮಾರ್ ಈ ರೀತಿ ಮಾಡಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್ ತಾನು ಯಾರಿಂದಲೂ ಪಾಠ ಕಲಿಯಬೇಕಾದ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಜನರಿಗೆ ನೀಡಿದ ಭರವಸೆಯಂತೆ ಪ್ರತಿಮೆ ಸ್ಥಾಪಿಸಿದ್ದೇನೆ. ಎಲ್ಲ ಧರ್ಮವನ್ನು ನಾನು ಗೌರವಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.