ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಂದು ವಾರ ಕಳೆದ ಬಳಿಕವಷ್ಟೇ ದೆಹಲಿಗೆ ತೆರಳಲಿದ್ದಾರೆ. ಇದರಿಂದ ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟ ಶಮನಗೊಳಿಸುವತ್ತ ಗಮನ ಹರಿಸಿದ್ದಾರೆ. ಇದರಿಂದಾಗಿ ಪೂರ್ಣ ಗಮನವನ್ನು ರಾಜ್ಯದತ್ತ ಹರಿಸಲು ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಪಕ್ಷದ ವರಿಷ್ಟರ ಜೊತೆ ಚರ್ಚಿಸಿದ ಬಳಿಕವಷ್ಟೆ ಅಂತಿಮ ನಿರ್ಧಾರ ಹೊರ ಬೀಳಲಿದೆ.