ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ಕೇಂದ್ರೀಯ ನಾಯಕತ್ವದೊಂದಿಗೆ ಚರ್ಚಿಸಲು ತಾವು ಇನ್ನೊಂದು ವಾರ ದೆಹಲಿಗೆ ಹೋಗುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಗೆ ಬರುವಂತೆ ಪಕ್ಷದ ಅಧ್ಯಕ್ಷರಾದ ಅಮಿತ್ ಶಾ ಕರೆದರೆ, ತೆರಳುತ್ತೇನೆ. ಬಹುಶ: ಇನ್ನೊಂದು ವಾರ ದೆಹಲಿಗೆ ತೆರಳುವ ಸಾಧ್ಯತೆ ಇಲ್ಲ. ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದರಿಂದ ಈಗ ತಾನೇ ಉಪಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಲು ‘ಅರ್ಹ’ತೆ ಪಡೆದಿರುವ ಶಾಸಕರು ಮಂತ್ರಿಗಿರಿ ಪಡೆಯಲು ಇನ್ನಷ್ಟು ಸಮಯ ಕಾಯಬೇಕಾಗಿದೆ.