ಬೆಂಗಳೂರು: ರಾಮನಗರ ಜಿಲ್ಲೆಯ ಮರುನಾಮಕರಣದ ವಿವಾದ ತೀವ್ರಗೊಳ್ಳುತ್ತಿದ್ದಂತೆ ಆ ಕುರಿತು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಂತಹ ಯಾವುದೆ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರ್ಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳು ಯಾವುದೇ ಹುರುಳಿಲ್ಲದ ಚರ್ಚೆಯಲ್ಲಿ ತೊಡಗಿದ್ದಾರೆ. ಬಹುಶ: ಆ ಎರಡು ಪಕ್ಷಗಳ ನಾಯಕರುಗಳು ಸುದ್ದಿಯಲ್ಲಿರಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.