ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ರಸ್ತೆ ದುರಸ್ತಿ ಹಾಗೂ ಅಪಾಯಕರ ಸ್ಥಿತಿ ಹಿನ್ನೆಲೆಯಲ್ಲಿ ಐದು ತಿಂಗಳಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಈಗ ಬೆಳಗ್ಗೆ ಆರರಿಂದ ಸಂಜೆ ಆರರವರೆಗೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅನುಮತಿ ನೀಡಿದ್ದಾರೆ.