ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಬೇಕಿದ್ದ ಶನಿವಾರದ (ಡಿ21) ಪರೀಕ್ಷೆಯೂ ಮುಂದೂಡಿಕೆಯಾಗಿದೆ.
ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದ್ದು, ನೂತನ ಪರೀಕ್ಷಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿಟಿಯು ಮೌಲ್ಯಮಾಪನ ಕುಲಸಚಿವ ಸತೀಶ್ ಅಣ್ಣಿಗೇರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ www.vtu.ac.in ಗಮನಿಸಬಹುದು.
ಪ್ರತಿಭಟನೆ ಹಿನ್ನೆಲೆಯಲ್ಲಿ 20ರಂದು ನಡೆಯಲಿದ್ದ ಪರೀಕ್ಷೆಗಳನ್ನು ಮುಂದೂಡಿದ್ದನ್ನು ಇಲ್ಲಿ ಸ್ಮರಿಸಬಹುದು.