ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಎಂಟು ಗಂಟೆಗೆ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಈ ಫಲಿತಾಂಶ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿದೆ. ಪಕ್ಷೇತರ ಶಾಸಕ ಎನ್. ನಾಗೇಶ್ ಅವರ ಬೆಂಬಲದೊಂದಿಗೆ ಬಿಜೆಪಿ ಬಲ ಸದ್ಯಕ್ಕೆ 106. ಕನಿಷ್ಟ 6 ಸ್ಥಾನ ಗೆದ್ದರೆ ಬಿಜೆಪಿಗೆ ತಾತ್ಕಾಲಿಕ ರಿಲೀಫ್ ದೊರೆಯಲಿದೆ. ಮತದಾನೋತ್ತರ ಸಮೀಕ್ಷೆ ಬಿಜೆಪಿಗೆ ಬಹುಮತ ನೀಡಿದೆ. ಆದರೆ ಇದರ ಬಗ್ಗೆ ತೆಲೆಕೆಡಿಸಿಕೊಳ್ಳದಿರುವ ಕಾಂಗ್ರೆಸ್ ಉತ್ತಮ ಫಲಿತಾಂಶದ ವಿಶ್ವಾಸ ವ್ಯಕ್ತಪಡಿಸಿದೆ.