ಬೆಂಗಳೂರು: ಪೌರತ್ವ ಕಾನೂನು ತಿದ್ದಪಡಿ ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆಗೆ ಹಲವು ಸಂಘಟನೆಗಳು ಕರೆ ನೀಡಿದ್ದರೂ ಶಾಲಾ ಕಾಲೇಜು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಫೇಸ್ ಬುಕ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಕಲಬುರ್ಗಿಯಲ್ಲಿ ಜಿಲ್ಲಾಧಿಕಾರಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.