Tuesday, March 2, 2021

ಶಿಶು ಸಾಹಿತಿ ಚಂದ್ರಕಾಂತ ಕರದಳ್ಳಿ ನಿಧನ

ಯಾದಗಿರಿ:  ಹಿರಿಯ ಶಿಶು ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಚಂದ್ರಕಾಂತ ಕರದಳ್ಳಿ (68) ತೀವ್ರ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಗುರುವಾರ ನಿಧನರಾದರು. ಶಹಾಪುರದಲ್ಲಿ ಶುಕ್ರವಾರ ಮೃತರ ಅಂತ್ಯಕ್ರಿಯೆ ಜರುಗಲಿದೆ. ಕರದಳ್ಳಿ ಅವರು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. 47ಕ್ಕೂ ಹೆಚ್ಚು ಶಿಶು ಕಥೆ, ಮಕ್ಕಳ ಪ್ರವಾಸ ಕಥನ, ನಾಟಕ, ಕಥಾ ಸಂಕಲನಗಳನ್ನು ರಚಿಸಿದ್ದಾರೆ. ಆನೆ ಬಂತು ಆನೆ, ನಲಿದಾಡು ಬಾ ನವಿಲೆ ಮೊದಲಾದವು ಪ್ರಮುಖ ಕೃತಿಗಳು.

ಮತ್ತಷ್ಟು ಸುದ್ದಿಗಳು

Latest News

ಯುವತಿಯೊಂದಿಗಿನ ವಿಡಿಯೋ: ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

newsics.com ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೇಳಿ ಯುವತಿಗೆ ಆಮಿಷವೊಡ್ಡಿ ಸಚಿವ ರಮೇಶ್ ಜಾರಕಿಹೊಳಿ ಆಕೆಯನ್ನು ಲೈಂಗಿಕವಾಗಿ ಬಳಕೆಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಿಹಳ್ಳಿ ಆರೋಪಿಸಿ ದೂರು...

ರಾಜ್ಯಸಭೆ, ಲೋಕಸಭೆ ಟಿವಿ ಇನ್ನು ‘ಸಂಸದ್ ಟಿವಿ’

newsics.com ನವದೆಹಲಿ: ರಾಜ್ಯ ಸಭಾ ಮತ್ತು ಲೋಕ ಸಭಾ ಟಿವಿಯನ್ನು ವಿಲೀನ ಮಾಡಲಾಗಿದ್ದು, ಇನ್ನು 'ಸಂಸದ್ ಟಿವಿ' ಎಂದು ಕರೆಯಲಾಗುತ್ತದೆ. ರಾಜ್ಯ‌ ಸಭೆ ಹಾಗೂ ಲೋಕ ಸಭೆ ಕಲಾಪಗಳನ್ನು ಪ್ರಸಾರ ಮಾಡುತ್ತಿದ್ದ ರಾಜ್ಯ ಸಭಾ ಮತ್ತು...

ಮೈಸೂರಿನ ಸುಧಾ ಹೆಗಡೆಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ

newsics.com ಮೈಸೂರು: ಮೈಸೂರಿನ ಸುಧಾ ಹೆಗಡೆ ಅವರಿಗೆ ಅತ್ಯುತ್ತಮ ಅಭಿನಯ ಪ್ರಶಸ್ತಿ ದೊರಕಿದೆ. ಬೆಂಗಳೂರಿನಲ್ಲಿ ಆಯೋಜಿಸಿದ್ದ ಬ್ಯುಸಿನೆಸ್ ಬೈ ಬ್ರಾಹ್ಮಿನ್ಸ್ ಪ್ರಾದೇಶಿಕ ಸಮ್ಮೇಳನದಲ್ಲಿ 'ಗೆಲುವಿನೆಡೆಗೆ' ಎಂಬ ನಾಟಕದ ಅಭಿನಯಕ್ಕೆ ಈ ಪ್ರಶಸ್ತಿ ದೊರಕಿದೆ. ನಾಟಕವನ್ನು ಎಂ.ಸಿ ಕೃಷ್ಣಪ್ರಸಾದ್...
- Advertisement -
error: Content is protected !!