Monday, January 24, 2022

ಸಚಿವಗಿರಿಗೆ ಭಾರೀ ಲಾಬಿ: ಸಿಎಂ ಮೇಲೆ ಒತ್ತಡ ತಂತ್ರ, ಕತ್ತಿ ಭೇಟಿ

Follow Us

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರೂ ತೀವ್ರ ಲಾಬಿ ಮಾತ್ರ ಮುಂದುವರಿದಿದೆ. ಸರ್ಕಾರ ರಚನೆಗೆ ಕಾರಣರಾಗಿದ್ದು ರಾಜೀನಾಮೆ ನೀಡಿ ಮತ್ತೆ ಗೆದ್ದು ಬಂದ ಎಲ್ಲ ಶಾಸಕರಿಗೆ ಸಚಿವ ಸ್ಥಾನದ ಭರವಸೆಯನ್ನು ಸಿಎಂ ನೀಡಿದ್ದಾರೆ. ಈ ಮಧ್ಯೆ ಬಿಜೆಪಿಯ ಹಲವು ಹಿರಿಯ ಶಾಸಕರು ಸಚಿವರಾಗುವ ಕನಸು ಹೊತ್ತು ಒತ್ತಡ ಹೇರಲಾರಂಭಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕತ್ತಿ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದಾರೆ. ಕಳೆದ ಬಾರಿ ಅಂತಿಮ ಕ್ಷಣದಲ್ಲಿ ಅವರಿಗೆ  ಸಚಿವ ಸ್ಥಾನ ಕೈ ತಪ್ಪಿತ್ತು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಯಲ್ಲಿ ಹೊಡೆದಾಡಿದ ಆಶಾ ಕಾರ್ಯಕರ್ತೆಯರು!

newsics.com ಪಾಟ್ನಾ : ನವಜಾತ ಶಿಶುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ  ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ...

ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ಇಂದಿನಿಂದಲೇ ಜಾರಿ

newsics.com ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ. ಬೆಂಗಳೂರು...

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

newsics.com ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ...
- Advertisement -
error: Content is protected !!