ಬೆಂಗಳೂರು: ಸಿಹಿಕಹಿ ಚಂದ್ರು ಮಗಳು ಹಿತಾ ಚಂದ್ರಶೇಖರ್ ತಮ್ಮ ಗೆಳೆಯ ನಟ ಕಿರಣ್ ಶ್ರೀನಿವಾಸ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ,
ಭಾನುವಾರ ನಟ ಕಿರಣ್ ಶ್ರೀನಿವಾಸ್ ಗುರು ಹಿರಿಯರು ನಿಶ್ಚಯ ಮಾಡಿದ್ದ ಶುಭ ಮುಹೂರ್ತದಲ್ಲಿ ಹಿತಾ ಚಂದ್ರಶೇಖರ್‌ಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ಈ ಜೋಡಿಯ ಮದುವೆ ಸಾಂಪ್ರದಾಯಿಕವಾಗಿ ಅದ್ಧೂರಿಯಾಗಿ ನಡೆದಿದೆ.
ಕಳೆದ ಮೇ ತಿಂಗಳಲ್ಲಿ ಕಿರಣ್
ಹಾಗೂ ಹಿತಾ ಚಂದ್ರಶೇಖರ್ ಅವರು ಕುಟುಂಬದವರ ಸಮ್ಮುಖದಲ್ಲಿ ಪರಸ್ಪರ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದರು.