ಉಡುಪಿ: ಸಹಜವಾಗಿ ಉಸಿರಾಡಲು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಶನಿವಾರ ಮಧ್ಯಾಹ್ನ ಪೇಜಾವರ ಶ್ರೀಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕಣ್ಣುಬಿಡಲು ಶ್ರೀಗಳುಯತ್ನಿಸುತ್ತಿದ್ದಾರೆ ಎಂದರು.ಶನಿವಾರ ಮಧ್ಯಾಹ್ನ ಆಸ್ಪತ್ರೆಗೆ ಆಗಮಿಸಿದ ಯಡಿಯೂರಪ್ಪ, ಆಸ್ಪತ್ರೆ ವೈದ್ಯರೊಂದಿಗೆ ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸಿದರು. ಪೇಜಾವರ ಶ್ರೀ ಶೀಘ್ರ ಗುಣಮುಖರಾಗಿ ಶ್ರೀಕೃಷ್ಣನ ಪೂಜೆ ಮಾಡಬೇಕು. ಅದನ್ನು ನಾವು ನೋಡಬೇಕು ಎಂದರು.