ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಈ ಭೇಟ ನಡೆದಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸಿತ್ವಕ್ತೆ ಬಂದ ಬಳಿಕ ಪಕ್ಷದ ಮೇಲೆ ಹಿಡಿತ ಸಾಧಿಸಲು ಉಭಯ ನಾಯಕರು ಪ್ರಯತ್ನಿಸಿದ್ದರು. ಅಂತಿಮವಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಾಬೀತುಪಡಿಸಿದ್ದರು. ಇದು ಹೈ ಕಮಾಂಡ್ ಮೆಚ್ಚುಗೆಗೆ ಕೂಡ ಪಾತ್ರವಾಗಿತ್ತು