ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಘೋಷಿಸುತ್ತಾರಾ?
ಇಂತಹದೊಂದು ಮಾಹಿತಿ ಕಾಂಗ್ರೆಸ್ ಪಡಸಾಲೆಯಲ್ಲೇ ಹರಿದಾಡುತ್ತಿದೆ. ಈಗಾಗಲೇ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಹಾಗೂ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ, ರಾಜಕೀಯ ನಿವೃತ್ತಿಯ ಬಗ್ಗೆಯೂ ಮಾತನಾಡುತ್ತಿದ್ದಾರೆ.
ನಿವೃತ್ತಿ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ನ ಹಾಲಿ, ಮಾಜಿ ಶಾಸಕರು, ಮುಖಂಡರು ಅವರ ನಿವಾಸಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರ ಕಾವೇರಿ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
ರಮೇಶ್ ಕುಮಾರ್, ಎಚ್.ಕೆ.ಪಾಟೀಲ್, ಐವನ್ ಡಿಸೋಜ, ಪ್ರಕಾಶ್ ರಾಠೋಡ್, ಜಯಮಾಲಾ, ಲಕ್ಷ್ಮೀ ಹೆಬ್ಬಾಳ್ಕರ್, ವಿ.ಎಸ್. ಉಗ್ರಪ್ಪ ಈಗಾಗಲೇ ಸಿದ್ದರಾಮಯ್ಯನವರ ನಿವಾಸಕ್ಕೆ ದೌಡಾಯಿಸಿ ರಾಜಕೀಯ ನಿವೃತ್ತಿ ಪಡೆಯದಂತೆ ಮನವಿ ಮಾಡಿದ್ದಾರೆ. ಅಲ್ಲದೆ ರಾಜೀನಾಮೆ ಹಿಂಪಡೆಯುವಂತೆಯೂ ಒತ್ತಾಯಿಸಿದ್ದಾರೆ.