ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ , ಪ್ರತಿಪಕ್ಷ ನಾಯಕ ಸಿದ್ದ ರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಶಿವಕುಮಾರ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನ ಅಲಂಕರಿಸುವುದನ್ನು ಸಿದ್ದರಾಮಯ್ಯ ಬಣ ವಿರೋಧಿಸುತ್ತಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಅಂತಿಮ ನಿರ್ಧಾರ ಪ್ರಕಟಗೊಳ್ಳುವ ಮೊದಲು ಸಿದ್ದರಾಮಯ್ಯ ಅವರ ಬೆಂಬಲ ಕೂಡ ಪಡೆಯಲು ಶಿವಕುಮಾರ್ ಯತ್ನ ನಡೆಸುತ್ತಿದ್ದಾರೆ