ಬಳ್ಳಾರಿ: ಇಂದಿನಿಂದ ನಡೆಯಲಿರುವ ಎರಡು ದಿನಗಳ ಹಂಪಿ ಉತ್ಸವವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಉತ್ಸವದ ಅಂಗವಾಗಿ ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಂಪಿ ಉತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಹೊಸಪೇಟೆ ನಗರದಲ್ಲಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಯ ವಸಂತ ವೈಭವ ನಡೆಯಿತು. ಹೊಸಪೇಟೆ ನಗರದ ವಡಕರಾಯನ ದೇವಸ್ಥಾನದಿಂದ ವಿಜಯನಗರ ಸಾಮ್ರಾಜ್ಯದ ವೈಭವವನ್ನು ನೆನಪಿಸುವ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಹಂಪಿ ಉತ್ಸವಕ್ಕೆ ಇಂದು ಚಾಲನೆ
Follow Us